ಬಿಜೆಪಿ ಟಿಕೆಟ್ ಸಿಗದಕ್ಕೆ ಕೆಂಡಾಮಂಡಲ, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ | JANATA NEWS

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ತಮಗೆ ಟಿಕೆಟ್ ನೀಡದ ಕಾರಣ ಅಸಮಾಧಾನಗೊಂಡಿರುವ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಣೆಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಶಂಕರ್ ಬದಲಿಗೆ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಆರ್ ಶಂಕರ್ ತಮ್ಮ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಆರ್ ಶಂಕರ್ ತಮ್ಮ ರಾಜಿನಾಮೆ ಪತ್ರವನ್ನು ನೀಡಿದರು. ಆರ್ ಶಂಕರ್ ಅವರು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಅಧಿಕೃತವಾಗಿ ಕಣಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ.
ಬಿಜೆಪಿಯಲ್ಲಿ ಟಿಕೆಟ್ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಆರ್. ಶಂಕರ್ ಅವರು ಬೆಂಬಲಿಗರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದರು.