Thu,Sep11,2025
ಕನ್ನಡ / English

ಬಿಜೆಪಿಗೆ ಗುಡ್ ಬೈ ಹೇಳಿದ ಜಗದೀಶ್ ಶೆಟ್ಟರ್! ಟಿಕೆಟ್ ಕೊಡದೇ ಇರಲು ಕೆಲವರ ಸ್ವಾರ್ಥ ಕಾರಣ! | JANATA NEWS

16 Apr 2023

ಶಿರಸಿ : ಇಂದು ಶಿರಸಿಯ ಸ್ಪೀಕರ್ ಕಚೇರಿಗೆ ಅಗಮಿಸಿದ ಶೆಟ್ಟರ್ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರು ಶಿರಸಿಯಲ್ಲಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ನನಗೆ ಹುದ್ದೆ, ಅಧಿಕಾರ ನೀಡಲಾಗಿತ್ತು ಎಂದಿದ್ದರೆ, ಟಿಕೆಟ್ ಸಲುವಾಗಿ ನನ್ನ ಪರವಾಗಿ ಆಗ ಮಾತಾಡಿ ಈಗ ಹೀಗೆ ಹೇಳಿದರೆ ಹೇಗೆ? ಹಿಂದೆ ಕೆಜೆಪಿ ಯಾಕೆ ಹೋಗಿದ್ದರು ಎಂದೂ ಕೇಳಿದ ಅವರು ಟಿಕೆಟ್ ಕೊಡದೇ ಇರಲು ಕೆಲವರ ಸ್ವಾರ್ಥ ಕಾರಣ ಎಂದರು.

ನನಗೆ ಆರೋಗ್ಯವಿದೆ, ಯಾವುದೇ ಕಪ್ಪು ಚುಕ್ಕೆ ಇಲ್ಲ, ಸಣ್ಣ ಗ್ರಾಮ ಪಂಚಾಯತ್‌ ನಿಂದ ಎಲ್ಲ ಕಡೆ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ನನಗೆ ವಯಸ್ಸೂ ಇದೆ. ಯಾಕೆ ಟಿಕೆಟ್ ಕೊಟ್ಟಿಲ್ಲ ಎಂದು ಕೇಳಿದರೂ ಹೇಳಿಲ್ಲ. ಆ ನೋವಿದೆ. ಮೂಲ ಬಿಜೆಪಿಗರನ್ನು ಹೊರಗೆ ಹಾಕಲಾಗುತ್ತಿದೆ.

ಮೂಲ ಮನೆಯಿಂದ ಹೊರ ಹೋಗುವ ನೋವು ನನಗೂ ಇದೆ. ಆದರೆ, ಹುಬ್ಬಳ್ಳಿಯಿಂದ ಸ್ಪರ್ಧಿಸುವುದು ಖಚಿತ. ಆದರೆ, ಹೇಗೆ ಎಂಬುದನ್ನು ಹುಬ್ಬಳ್ಳಿಗೆ ತೆರಳಿ ಸಮಾಲೋಚನೆ ನಡಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿಗೆ ರಾಜಿನಾಮೆ ನೀಡಿದ ಜಗದೀಶ್ ಶೆಟ್ಟರ್ ಹೇಳಿದರು.

RELATED TOPICS:
English summary :Jagdish Shettar said goodbye to BJP

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...