ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರ ನೋವು ತಂದಿದೆ: ಸಿಎಂ ಬೊಮ್ಮಾಯಿ | JANATA NEWS

ಹುಬ್ಬಳ್ಳಿ : ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಈಶ್ವರಪ್ಪ ಸೇರಿ ಹಲವು ನಾಯಕರಿಗೆ ಟಿಕೆಟ್ ನೀಡಲಾಗಿಲ್ಲ. ಪಕ್ಷದಲ್ಲಿ ಅಸಮಾಧಾನ ಭುಗಿಲೆದಿದ್ದು, ಡ್ಯಾಮೇಜ್ ಕಂಟ್ರೋಲ್ ಸರಿಪಡಿಸುತ್ತೇವೆ.
ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಹಿರಿಯ ನಾಯಕರು ಅವರ ಮನವೊಲಿಕೆಗೆ ಎಲ್ಲ ಪ್ರಯತ್ನ ಮಾಡಿದ್ದೇವೆ ಎಂದ ಅವರು ರಾಷ್ಟ್ರೀಯ ಮಟ್ಟದ ಸ್ಥಾನಮಾನದ ಭರವಸೆ ನೀಡಿದೆವು ಅವರ ಕುಟುಂಬಕ್ಕೂ ಟಿಕೇಟ್ ಭರವಸೆ ಕೊಟ್ಟಿದ್ದೆವು ಆದರೂ ರಾಜೀನಾಮೆ ಈ ನಿರ್ಧಾರ ಕೈಗೊಂಡಿರೋದು ದುರ್ದೈವ ಎಂದರು.
ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದರು.
ಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಗಿತ್ತು. ದಿಲ್ಲಿ ಮಟ್ಟದಲ್ಲಿ ಹುದ್ದೆ ಕೊಡುವುದಾಗಿ ನಡ್ಡಾ, ಅಮಿತ್ ಶಾ ಹೇಳಿದರು. ನಾನು ನಿನ್ನೆ ಚರ್ಚೆ ಮಾಡಿ ಹೇಳಿದ್ದೆ. ಅಷ್ಟೇ ಅಲ್ಲದೇ ಅವರು ಹೇಳಿರುವವರಿಗೆ ಟಿಕೆಟ್ ಕೊಡುತ್ತೇವೆ ಎಂದಿತ್ತು. ಆದರೂ ಶೆಟ್ಟರ್ ರಾಜೀನಾಮೆ ನೀಡಿರುವುದು ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಅತಿಹೆಚ್ಚು ಮಂತ್ರಿ ಸ್ಥಾನ ಕೊಟ್ಟಿದ್ದು ಬಿಜೆಪಿ. ಲಿಂಗಾಯತ ಸಮುದಾಯಕ್ಕೆ ಅತಿಹೆಚ್ಚು ಸೀಟ್ ಕೊಟ್ಟಿದ್ದು ಬಿಜೆಪಿ. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳೆದು ನಿಂತಿದೆ. ಎರಡನೇ ಪೀಳೀಗೆಯಲ್ಲಿ ಲಿಂಗಾಯತ ಸಮುದಾಯದ ಸಿಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಎಲ್ಲರಿಗೂ ಅವಕಾಶ ಕೊಡಲಾಗಿದೆ ಎಂದರು.