ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ | JANATA NEWS

ಬೆಂಗಳೂರು : ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಡಿಕೆಶಿ ಅರ್ಜಿಯ ವಿಚಾರಣೆ ನಡೆಸಲಾಯಿತು. ಇಂದು ಡಿಕೆ ಶಿವಕುಮಾರ್ ಹಾಗೂ ಸಿಬಿಐ ಪರ ವಕೀಲರು ತಮ್ಮ ವಾದ ಮಂಡಿಸಿ, ಅಂತ್ಯಗೊಳಿಸಿದರು.
ಡಿಕೆ ಶಿವಕುಮಾರ್ ಹಾಗೂ ಸಿಬಿಐ ಪರ ವಕೀಲರ ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದಂತ ನ್ಯಾಯಪೀಠವು, ಆದೇಶವನ್ನು ಕಾಯ್ದಿರಿಸಿದೆ.
RELATED TOPICS:
English summary :Illegal property gain case against DK Sivakumar: High Court reserved judgment