Sun,May19,2024
ಕನ್ನಡ / English

ನಂಗೆ ಟಿಕೆಟ್ ಕೈತಪ್ಪಲು ಕಾರಣ ಬಿ.ಎಲ್. ಸಂತೋಷ್: ಜಗದೀಶ್ ಶೆಟ್ಟರ್ | JANATA NEWS

18 Apr 2023
2321

ಹುಬ್ಬಳ್ಳಿ : ನನಗೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಲು ಕಾರಣ ಬಿ.ಎಲ್.ಸಂತೋಷ್ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಕಾರಣ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. ಅವರ ಟೀಂ ಕೂಡ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತು ಎಂದು ಅವರು ಹೇಳಿದರು.

ಬಿಜೆಪಿಯ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು ಅನ್ನೋದು ಗೊತ್ತಿದೆ. ಆದರೆ, ಹೈಕಮಾಂಡ್​ ಲೇವಲ್​​ನಲ್ಲಿ ಏನಾಯ್ತೋ ನನಗೆ ಗೊತ್ತಿಲ್ಲ. ನಾನು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮಹೇಶ್ ತೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಮೇಲೆ ಪಕ್ಷಕ್ಕೆ ಅಷ್ಟು ಗೌರವವಿದ್ದರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಬಹುದಿತ್ತು ಅಥವಾ ಕೇಂದ್ರಕ್ಕೆ ತೆಗೆದುಕೊಳ್ಳಬಹುದಾಗಿತ್ತು. ಆದರೆ, ಬಿ.ಎಲ್ ಸಂತೋಷ್ ಅವರಿಗೆ ನನ್ನ ಮೇಲೆ ಕಣ್ಣಿತ್ತು. ನನ್ನನ್ನು ಪದೇ ಪದೇ ಅವಮಾನಿಸಿದರು. ಅಪಪ್ರಚಾರ ನಡೆಸಿದರು. ಕಡೆಗೆ ಟಿಕೆಟ್ ಕೊಡದೇ ಸತಾಯಿಸಿದರು ಎಂದು ಆರೋಪಿಸಿದ್ದಾರೆ.

ಮೊದಲ ಪಟ್ಟಿ ಬಿಡುಗಡೆಗೆ ಮೂರು ದಿನ ಮುನ್ನ ನನಗೆ ಧರ್ಮೇಂದ್ರ ಪ್ರಧಾನ್ ದೂರವಾಣಿ ಕರೆ ಮಾಡಿದರು. ನಿಮಗೆ ಈ ಬಾರಿ ಟಿಕೆಟ್ ನೀಡುತ್ತಿಲ್ಲ. ಅದಕ್ಕೆ ಅಪ್ಪಣೆ ಪತ್ರವನ್ನು ಕಳುಹಿಸುತ್ತೇವೆ, ಸಹಿ ಮಾಡಿ ಕಳುಹಿಸಿ ಎಂದು ಹೇಳಿ ಫೋನ್ ಇಟ್ಟರು. ಕೇವಲ ಮೂರು ಲೈನ್​ನಲ್ಲಿ ಹೇಳಿ, ಟಿಕೆಟ್ ವಿಚಾರವನ್ನು ಅಲ್ಲಿಗೆ ಕೈಬಿಟ್ಟರು.

ನನ್ನನ್ನು ಕರೆಸಿ ಮಾತನಾಡಬಹುದಿತ್ತು. ಆದರೆ ಹಾಗೆ ಮಾಡಿಲ್ಲ. ಇನ್ನು, ನನಗೆ ಮುಖ್ಯಮಂತ್ರಿ ಅಧಿಕಾರ ಕೊಟ್ಟಿದ್ದಕ್ಕೆ ನಾನು ಬಿಜೆಪಿಗೆ ಧನ್ಯವಾದ ಅರ್ಪಿಸುತ್ತೇನೆ. ಆದರೆ, 10 ತಿಂಗಳ ಕಾಲವಷ್ಟೇ ಅಧಿಕಾರ ಕೊಟ್ಟಿದ್ದು. ನನಗಿಂತಲೂ ಕಿರಿಯರಾದ ಬೊಮ್ಮಾಯಿಯವರಿಗೆ ಈಗಾಗಲೇ ಸುಮಾರು 2 ವರ್ಷಗಳಿಂದ ಸಿಎಂ ಪದವಿ ಕೊಟ್ಟಿದ್ದೀರಲ್ಲವೇ? ನನಗೆ ಅದಕ್ಕಿಂತಲೂ ಕಡಿಮೆ ಅವಧಿಗೆ ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇಷ್ಟಕ್ಕೆಲ್ಲ ಕಾರಣ ಬಿಎಲ್. ಸಂತೋಷ್. ಬಿ.ಎಲ್.ಸಂತೋಷ್ ಅವರು ತಮ್ಮ ಮಾನಸ ಪುತ್ರನಿಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ನನಗೆ ಟಿಕೆಟ್ ಕೊಡಲಿಲ್ಲ ಎಂದು ಗಂಭೀರವಾದ ಆರೋಪ ಮಾಡಿದರು.

RELATED TOPICS:
English summary :The reason why I lost the ticket was B.L. Santhosh: Jagdish Shettar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...