Tue,May14,2024
ಕನ್ನಡ / English

ಆದಾಯ ಮೀರಿ ಆಸ್ತಿ ಗಳಿಕೆ, ಡಿಕೆಶಿ ವಿರುದ್ಧದ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ | JANATA NEWS

20 Apr 2023
949

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಿಬಿಐ ತನಿಖೆಗೆ ಸರ್ಕಾರ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಡಿಕೆ ಶಿವಕುಮಾರ್ ಹೈಕೋರ್ಟ್​ಗೆ ಮನವಿ ಮಾಡಿದ್ದರು. ಇದು ತಿರಸ್ಕೃತಗೊಂಡಿರುವುದರಿಂದ ಚುನಾವಣೆ ಸಂದರ್ಭದಲ್ಲೇ ಅವರಿಗೆ ಸಂಕಷ್ಟ ಎದುರಾದಂತಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು, ಇದನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷರು ಹೈಕೋರ್ಟ್ ಮೆಟ್ಟಿಲೇರಿದ್ದರು. ತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು.

ಈ ಕುರಿತಂತೆ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಅರ್ಜಿ ವಜಾಗೊಳಿಸಿರುವುದಾಗಿ ಪ್ರಕಟಿಸಿದೆ. ಇದರಿಂದ ಡಿ.ಕೆ. ಶಿವಕುಮಾರ್ ಮತ್ತೆ ಸಂಕಷ್ಟ ಎದುರಾದಂತಾಗಿದೆ.

ಅರ್ಜಿಗೆ ಸಂಬಂಧಿಸಿದಂತೆ ಈ ಹಿಂದೆ ನಡೆದ ವಿಚಾರಣೆ ವೇಳೆ, ಶಿವಕುಮಾರ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣವನ್ನು ದಾಖಲಿಸಿರುವ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳು ಶಿವಕುಮಾರ್ ಅವರ ಪರವಾಗಿವೆ. ಇದು ನಾಲ್ಕನೇ ಎಫ್‌ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರಕ್ಕೆ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸು ಮಾಡಲಾದ ಕ್ರಮ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿರುವುದು ಮತ್ತು ಅಲ್ಲಿಯವರೆಗೆ ಸಿಬಿಐ ತನಿಖೆಗೆ ನೀಡಲಾಗಿರುವ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿರುವ ಕಾರಣ ಚುನಾವಣೆಗೆ ಸ್ಪರ್ಧಿಸಲು ಡಿಕೆ ಶಿವಕುಮಾರ್​ ಅವರಿಗೆ ಯಾವುದೇ ಸಮಸ್ಯೆ ಆಗದು ಎಂದಿತು.

RELATED TOPICS:
English summary :The High Court dismissed the petition challenging the investigation against DK for acquiring assets beyond income

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...