ಕನಕಪುರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ! | JANATA NEWS

ರಾಮನಗರ : ಡಿ.ಕೆ.ಸುರೇಶ್ ಇಂದು ಕನಕಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಹೊಳೆನರಸಿಪುರದಲ್ಲಿ ಬಿಜೆಪಿ ಕೊನೆ ಕ್ಷಣದಲ್ಲಿ ಹಾಸನ ಶಾಸಕ ಪ್ರೀತಮ್ ಗೌಡ ಅವರನ್ನು ರೇವಣ್ಣ ವಿರುದ್ಧ ಕಣಕ್ಕಿಳಿಸಿತ್ತು. ಈಗ ಕನಕಪುರದಲ್ಲಿ ಕಾಂಗ್ರೆಸ್ ಡಿ.ಕೆ ಸುರೇಶ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಡಿಕೆ ಸುರೇಶ್, ಡಿ.ಕೆ. ಶಿವಕುಮಾರ್ ಅವರ ಮೇಲೆ ಸಾಕಷ್ಟು ಕಣ್ಣುಗಳು ಬಿದ್ದಿವೆ. ವಾಮಮಾರ್ಗದಿಂದ ಡಿಕೆಶಿಯನ್ನು ಮಣಿಸಲು ಬಿಜೆಪಿ ಪ್ಲಾನ್ ಮಾಡಿದೆ. ನಾಲ್ಕು ದಿನದ ಹಿಂದೆ ಕೂಡ ಚೆನೈನಿಂದ ಐಟಿ ಅವರು ನೋಟಿಸ್ ನೀಡಿದರು. ಖುದ್ದು ನೀವೆ ಹಾಜರಾಗಬೇಕು ಎಂದು ಹೇಳಿದ್ದಾರೆ ಎಂದರು. ನಮ್ಮ ಮೇಲಿನ ಕೇಸ್ಗಳ ಮೇಲೆ ಎಲ್ಲ ಕಡೆ ತಡೆಯಾಜ್ಞೆಗಳು ಇವೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಡಿಕೆಶಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದರು.