ನಾನು ಸಿಎಂ ಆದ್ರೆ ಮುಸ್ಲಿಮರಿಗೆ ಮೀಸಲಾತಿ, ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಕಡಿವಾಣ | JANATA NEWS

ಬೆಂಗಳೂರು : ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರಿಗೆ ಮತ್ತೆ ಶೇ.4ರ ಮೀಸಲಾತಿ ನೀಡುತ್ತೇನೆ. ಜತೆಗೆ ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಸರ್ಕಾರ ಮುಸ್ಲಿರ ಮೀಸಲಾತಿಯನ್ನು ರದ್ದುಗೊಳಿಸಿ ಅದನ್ನು ಒಕ್ಕಲಿಗರು ಹಾಗೂ ಲಿಂಗಾಯತರಿಗೆ ನೀಡಿದೆ.
ರಾಜ್ಯದಲ್ಲಿ ಮತ್ತೆ ನಾನು ಸಿಎಂ ಆದರೆ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡುತ್ತೇನೆ, ರಾಜ್ಯದಲ್ಲಿ ಅಮುಲ್ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು
.
ಅಮುಲ್ ತನ್ನ ಪ್ರಸ್ತುತ ಗ್ರಾಹಕರ ನೆಲೆಯಲ್ಲಿ ವ್ಯವಹರಿಸುವುದನ್ನು ಬಿಟ್ಟು, ಕರ್ನಾಟಕ ಪ್ರವೇಶಿಸಿ ಇಲ್ಲಿನ ರೈತರಿಗೆ ಅನ್ಯಾಯ ಮಾಡಲು ಯತ್ನಿಸುತ್ತಿದೆ. ಹೀಗಾಗಿಯೇ ನಾನು ಅಮುಲ್ ಪ್ರವೇಶವನ್ನು ವಿರೋಧಿಸುತ್ತೇನೆ. ನಾನು ಮುಖ್ಯಮಂತ್ರಿಯಾದರೆ ಅಮುಲ್ ಹಾಲನ್ನು ಖರೀದಿಸಬೇಡಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.