ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ, ಶಿವರಾಜ್ಕುಮಾರ್ ಕೂಡ ಪ್ರಚಾರಕ್ಕೆ ಬರುತ್ತಾರೆ! | JANATA NEWS

ಬೆಂಗಳೂರು : ಗೀತಾ ಶಿವರಾಜ್ಕುಮಾರ್ ಇವತ್ತು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಗೀತಾ ಶಿವರಾಜ್ಕುಮಾರ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಈ ವೇಳೆ ಗೀತಾ ಅವರ ಸಹೋದರ ಮಧು ಬಂಗಾರಪ್ಪ, ಸಾಧು ಕೋಕಿಲಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪಕ್ಷ ಸೇರ್ಪಡೆ ಬೆನ್ನಲ್ಲೇ ಮಾತನಾಡಿ, ಇಂದು ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಇದು ನಮ್ಮ ತಂದೆಯವರು ಇದ್ದಂತಹ ಪಕ್ಷ. ಕಾಂಗ್ರೆಸ್ ಪಕ್ಷಕ್ಕೆ ಬದ್ಧವಾಗಿರುತ್ತೇನೆ. ನಮ್ಮ ತಮ್ಮನ ಪರವಾಗಿ ಪ್ರಚಾರ ಮಾಡುತ್ತೇನೆ ಎಂದರು.
ನನ್ನ ತಮ್ಮ ಎಲ್ಲಿರ್ತಾನೋ ನಾನೂ ಅಲ್ಲೇ ಇರುತ್ತೇನೆ. ನಾಳೆಯಿಂದಲೇ ಕ್ಯಾಂಪೇನ್ಗೆ ಹೋಗ್ತಾ ಇದ್ದೇವೆ. ಕೆಲವು ಕಡೆ ಶಿವರಾಜ್ ಕುಮಾರ್ ಕೂಡ ಪ್ರಚಾರ ಮಾಡ್ತಾರೆ ಎಂದರು. ನಮ್ಮ ತಂದೆ ಬಂಗಾರಪ್ಪನವರನ್ನು ಮುಖ್ಯಮಂತ್ರಿ ಮಾಡಿದ ಪಕ್ಷ. ಐತಿಹಾಸಿಕ ಪಕ್ಷಕ್ಕೆ ಸೇರುತ್ತಿರುವುದು ಖುಷಿ ತಂದಿದೆ. ಎಲ್ಲೆಲ್ಲಿ ಪ್ರಚಾರ ಮಾಡಬೇಕೆಂಬ ಬಗ್ಗೆ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಶಿವರಾಜಕುಮಾರ್ ಸೊರಬದಲ್ಲಿ ಪ್ರಚಾರಕ್ಕೆ ಬರುತ್ತಾರೆ. ಅವರು ಈಗ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಗ್ಯಾರಂಟಿ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.