Thu,May09,2024
ಕನ್ನಡ / English

ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಸಿಎಂ ಬೊಮ್ಮಾಯಿ | JANATA NEWS

29 Apr 2023
2081

ಬೀದರ್ : ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಗೆ ಮೋದಿ ಪ್ರಯಾಣ ಬೆಳೆಸಿದ್ದು 10:20ಕ್ಕೆ ಬೀದರ್ ಏರಬೇಸ್​ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್​ಗೆ‌ ಮೋದಿ ಪ್ರಯಾಣಿಸಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಮಾನವ, ವಿಶ್ವ ಬಂಧು ಬಸವಣ್ಣನ ನಾಡಿನಲ್ಲಿ ಆಧುನಿಕ ವಿಶ್ವನಾಯಕ ಮೋದಿಯವರಿಗೆ ಸ್ವಾಗತಿಸುತ್ತಿದ್ದೇನೆ. ವಿಶ್ವದ ಮೊದಲ ಪ್ರಜಾಪ್ರಭುತ್ವದ ಮೊದ ಸಂಕೇತ ಇದ್ದರೆ ಅದು ಅನುಭವ ಮಂಟಪ. ಇದನ್ನು ಗುರುತಿಸಿದವರು ಪ್ರಧಾನಿ ಮೋದಿಯವರು. ಪ್ರಜಾಪ್ರಭುತ್ವ ಎಂದರೆ ಸಮಾನತೆ, ಎಲ್ಲರನ್ನೂ ಸರಿಸಮಾನವಾಗಿ ನೋಡುವಂತಹದ್ದು ಎಂದರು. ಇದನ್ನು ಕಾಂಗ್ರೆಸ್ ಮಾಡುತ್ತಿಲ್ಲ. ನಾವು ದೀನ ದಲಿತರಿಗೆ ವಿಶೇಷ ಕಾರ್ಯಕ್ರಮಗಳ ಮೂಲಕ ನಾವು ಸಮಾನತೆಯ ಅನುಭವ ನೀಡಿದ್ದೇವೆ.

ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ, ಬೀದರ್​ಗೆ, ಕಲಬುರ್ಗಿಗೆ ಹೊಸ ಟೆಕ್ಸ್​ಟೈಲ್​ ಪಾರ್ಕ್​ಅನ್ನು ಪ್ರಧಾನಿ ಮೋದಿಯ ನೇತೃತ್ವದಲ್ಲಿ ನಡೆದಿದ್ದು ಒಂದು ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಈ ನಡುವೆಯೂ ಕಾಂಗ್ರೆಸ್, ಲಿಂಗಾಯತ ನಾಯಕರು ಭ್ರಷ್ಟ ನಾಯಕರು ಎನ್ನುತ್ತಾರೆ' ಎಂದಿದ್ದಾರೆ.

ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ್​ ಖರ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಸಿಎಂ ಎಲ್ಲರೂ ಭ್ರಷ್ಟರು ಎಂದು ಹೇಳುತ್ತಾರೆ. ಕಾಂಗ್ರೆಸ್​ನವರಿಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಭ್ರಷ್ಟ ಆಡಳಿತ ನೀಡಿದರು. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ ಪರ್ವವೇ ನಡೆದು ಹೋಗಿದೆ. ಜನರಿಗೆ ಅಮೃತ ಕೊಡುವ ನಾಯಕ ಪ್ರಧಾನಿ ಮೋದಿ. ನೀಲಕಂಠನಾಗಿ ವಿಷ ಕುಡಿದು ಅಮೃತ ಕೊಡುವ ನಾಯಕ ಎಂದರು.

ಕೋವಿಡ್ ವೇಳೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಕೊಡಲಾಗಿದೆ. 72 ವರ್ಷದಲ್ಲಿ ಆಗದ ಕೆಲಸಗಳನ್ನು ಪ್ರಧಾನಿಯವರು 3 ವರ್ಷದಲ್ಲಿ ನೆರವೇರಿಸಿದ್ದಾರೆ. ಕಲಬುರಗಿಗೆ ಮೆಗಾ ಟೆಕ್ಸ್​ಟೈಲ್ಸ್​ ಪಾರ್ಕ್ ಕೊಟ್ಟಿದ್ದಾರೆ. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗಿವೆ ಎಂದು ಹೇಳಿದರು.

RELATED TOPICS:
English summary :PM Modi drinking poison of society: CM Bommai

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...