ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಕಾರ್ಗೆ ಬೈಕ್ ಡಿಕ್ಕಿ, ಮೂವರ ಸ್ಥಳದಲ್ಲಿಯೇ ಸಾವು | JANATA NEWS

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ಕಾರ್ಗೆ ಬೈಕ್ ಡಿಕ್ಕಿ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಒಂದೇ ಬೈಕ್ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೂವರು ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿಯ ಮುಂಭಾಗದಲ್ಲಿ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದಾರೆ.
ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮತ್ತೊಬ್ಬ ಸಾವನ್ನಪ್ಪಿದ್ದಾನೆ.
ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.