ಬಿಜೆಪಿ ಪ್ರಣಾಳಿಕೆ ಬೋಗಸ್, ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ | JANATA NEWS

ಗದಗ : ಬಿಜೆಪಿ ನಾಯಕರು ಬೋಗಸ್ ಭರವಸೆಗಳನ್ನು ಕೊಡುತ್ತಾರೆ ಎಂದು ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬೆಳ್ಳಟ್ಟಿ ಗ್ರಾಮಕ್ಕೆ ಭೇಟಿನೀಡಿ ಮಾತಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ (manifesto) ಬೋಗಸ್ ಎಂದು ಹೇಳಿದರು.
2018 ರಲ್ಲಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಿಜೆಪಿ 600 ಭರವಸೆಗಳನ್ನು ನೀಡಿತ್ತು. ಆದರೆ ಅವುಗಳಲ್ಲಿ 55 ಭರವಸೆಗಳನ್ನು ಮಾತ್ರ ಈಡೇರಿಸಿದೆ ಎಂದು ಅವರು ಹೇಳಿದರು.
ನಾಳೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ನಾವು ಬಿಡುಗಡೆ ಮಾಡುವ ಪ್ರಣಾಳಿಕೆ ಅನುಷ್ಠಾನಕ್ಕೆ ಬರುತ್ತೆ. ಈ ಹಿಂದೆ ನಾವು 165ರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇದೇ ಕಾಂಗ್ರೆಸ್, ಬಿಜೆಪಿ ನಡುವಿನ ವ್ಯತ್ಯಾಸ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.