Sun,May19,2024
ಕನ್ನಡ / English

ದೇಶದ್ರೋಹಿ ಪಿ.ಎಫ್.ಐ ಜೊತೆ ಹೋಲಿಕೆ ಮಾಡಿದರೆ ಜನರು ತಕ್ಕ ಉತ್ತರ ನೀಡುತ್ತಾರೆ: ಬಸವರಾಜ ಬೊಮ್ಮಾಯಿ | JANATA NEWS

02 May 2023
1308

ಹುಬ್ಬಳ್ಳಿ: : ಬಜರಂಗದಳ ನಿಷೇಧ ವಿಷಯವನ್ನು ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ದೇಶವಿರೋಧಿ ಸಂಘಟನೆ ಪಿಎಫ್‌ಐಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತಹ ಸಂಘಟನೆಯನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಪಿಎಫ್‌ಐಗೂ ಬಜರಂಗದಳಕ್ಕೂ ಹೋಲಿಕೆ ಸರಿಯಲ್ಲ. ಮೇಲಾಗಿ, ಬಜರಂಗದಳ ನಿಷೇಧ ಮಾಡುವ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಇದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇಂದು ಕುಂದಗೋಳದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಆರ್ ಪಾಟೀಲ್ ಪರ ಪ್ರಚಾರ ನಡೆಸಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ಯೋಜನೆಗಳೇ ಇಂದು ಕಾಂಗ್ರೆಸ್ ಪ್ರಣಾಳಿಕೆಗಳಾಗಿವೆ. ಇದಕ್ಕೂ ಮೊದಲು ಗ್ಯಾರೆಂಟಿ ‌ಕಾರ್ಡ್ ನೀಡಿದ್ದ ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಕೋವಿಡ್ ನಂತರ‌ ನಾವು ಈಗಾಗಲೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ಮೋದಿ ಅಕ್ಕಿಗೆ ತಮ್ಮ ಗೋಣಿ‌ ಚೀಲ ಹಾಕಿ ಅದಕ್ಕೆ ತಮ್ಮ ಫೋಟೊ ಹಾಕಿ ಕೊಂಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಈಗಾಗಲೇ ಘೊಷಣೆ ಮಾಡಿದೆ. ಅದನ್ನೇ ಬೇರೆ ಹೆಸರಲ್ಲಿ ಘೋಷಣೆ ಮಾಡಿದ್ದಾರೆ. ಕಳಸಾ ಬಂಡೂರಿ ಐದು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ನಾವು ಈಗಾಗಲೇ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಕುಂದಗೋಳದಲ್ಲಿ ಹೆಚ್ಚು ಮೆಣಸಿನಕಾಯಿ ಬೆಳೆಯುತ್ತಾರೆ. ಆದರೆ ಬ್ಯಾಡಗಿ ಮೆಣಸಿನಕಾಯಿಗೆ ಹೆಸರುವಾಸಿಯಾಗಿದೆ. ಮುಂದಿನ ವರ್ಷದಿಂದ ಕುಂದಗೋಳದಲ್ಲಿಯೇ ಮೆಣಸಿನಕಾಯಿ ಖರೀದಿ ಮಾಡುವ ವ್ಯವಸ್ಥೆ ಮಾಡಲಾಗುವುದು. ಒಂದೆಡೆ ದೇಶಭಕ್ತಿ, ದೇಶದ ಅಭಿವೃದ್ಧಿ ಭದ್ರತೆಯ ಆಧಾರದಲ್ಲಿ ನಾವು ಮತ ಕೇಳುತ್ತಿದ್ದೇವೆ. ಇನ್ನೊಂದೆಡೆ ದೇಶ ವಿರೋಧಿಗಳ ಜೊತೆ ಕೈ ಜೋಡಿಸಿ, ದೇಶ ವಿಭಜನೆ ಮಾಡುವ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಇನ್ನೊಂದು ಕಡೆ ಇದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕುಂದಗೊಳದಲ್ಲಿ 20 ಸಾವಿರ ರೈತರಿಗೆ ತಲುಪಿದೆ ಎಂದು ತಿಳಿಸಿದರು.

RELATED TOPICS:
English summary :People give befitting reply when compared with traitor PFI: Basavaraja Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...