ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧ ಮಾಡುವ ಭರವಸೆ! | JANATA NEWS

ಬೆಂಗಳೂರು : ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಭಜರಂಗದಳವನ್ನು ನಿಷೇಧ ಮಾಡುವ ಭರವಸೆವನ್ನು ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಎಲ್ಲಾ ಅನ್ಯಾಯದ ಕಾನೂನುಗಳು ಮತ್ತು ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಮಂಗಳವಾರ ತನ್ನ ಮೇ 10 ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು.
ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ವಿರುದ್ಧ ದ್ವೇಷ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಬಜರಂಗದಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಇತರ ಸಂಘಟನೆಗಳನ್ನು ನಿಷೇಧಿಸುವುದು ಸೇರಿದಂತೆ ಕಾನೂನಿನ ಪ್ರಕಾರ "ನಿರ್ಣಾಯಕ ಕ್ರಮ" ತೆಗೆದುಕೊಳ್ಳುತ್ತದೆ ಎಂದು ಪಕ್ಷ ಹೇಳಿದೆ.
ಪ್ರಣಾಳಿಕೆಯ ಮುಖ್ಯಾಂಶಗಳು:
ಬಿಪಿಎಲ್ ಕುಟುಂಬಕ್ಕೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ.
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತದೆ.
ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರವವರನ್ನು ಖಾಯಂ ಕೆಲಸಗಾರರನ್ನಾಗಿ ಮಾಡಲಾಗುತ್ತದೆ. ಆರೋಗ್ಯ & ಕುಟುಂಬ ಕಲ್ಯಾಣದಲ್ಲಿ ಕೆಲಸ ಮಾಡುವ ನೌಕರರ ಉದ್ಯೋಗ ಖಾಯಂ
ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟಿ ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ.
ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ
ಆಶಾ ಕಾರ್ಯಕರ್ತೆಯರ ಗೌರವಧನ 8 ರೂ.ಗೆ ಹೆಚ್ಚಳ
ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕರಿಗೆ ನೆರವು
ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು 1 ವರ್ಷದಲ್ಲಿ ಭರ್ತಿ ಮಾಡಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ವೇತನ 15 ರೂ.ಗೆ ಹೆಚ್ಚಿಸಲಾಗುತ್ತದೆ.
ಕೋಮುಗಳ ನಡುವೆ ಯಾವುದೇ ಬಗೆಯ ದ್ವೇಷ ಬಿತ್ತುವ ಬಜರಂಗದಳ,ಪಿಎಫ್ ಐ ಸೇರಿದಂತೆ ಇತರ ಯಾವುದೇ ಸಂಘಟನೆಗಳಿದ್ದರೂ ಅದನ್ನು ಕಾನೂನು ಅನುಸಾರವಾಗಿ ನಿಷೇಧ ಮಾಡಲಾಗುವುದು.
ಎಸ್ ಸಿ ಸಮುದಾಯ ಮೀಸಲಾತಿ ಶೇ 17 ಹೆಚ್ಚಿಸುವ ಭರವಸೆ,ಎಸ್ ಟಿ ಸಮುದಾಯ ಮೀಸಲಾತಿ ಶೇ. 7 ಹೆಚ್ಚಿಸುವ ಭರವಸೆ
ಆಟೋ, ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪಿಸುವ ಭರವಸೆ
ಕೋರ್ಟ್ ಗಳ ಆಧುನಿಕರಣದ ಭರವಸೆ
ಪತ್ರಕರ್ತರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಭರವಸೆ
ಮಂಗಳಮುಖಿ ಮಂಡಳಿ ಸ್ಥಾಪಿಸುವ ಭರವಸೆ
ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ಬಸ್ ಸೌಲಭ್ಯ
ಎಲ್ಲಾ ಪೊಲೀಸರಿಗೆ ವರ್ಷಕ್ಕೆ 1 ತಿಂಗಳ ವೇತನ ಹೆಚ್ಚಳ
ಎನ್ ಇಪಿಯನ್ನು ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುವುದು.
4 ವರ್ಷದಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ
ಮುಸ್ಲಿಂಮರ ಶೇ.4 ರಷ್ಟು ಮೀಸಲಾತಿ ಮರುಸ್ಥಾಪನೆ
ಎಸ್ ಟಿ ,ಎಸ್ ಸಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಭರವಸೆ
ನಾಡದೋಣಿ ಮೀನುಗಾರರಿಗೆ 10 ಸಾವಿರ ಹಣಕಾಸಿನ ನೆರವು
ನೀರಾವರಿಗಾಗಿ 5 ವರ್ಷದಲ್ಲಿ 1.50 ಲಕ್ಷ ಕೋಟಿ ರೂ. ಮೀಸಲು
ಬಿಸಿಯೂಟ ನೌಕರರ ಗೌರಧನ 6 ಸಾವಿರ ರೂ.ಗೆ ಹೆಚ್ಚಳ
ರಾತ್ರಿಪಾಳಿಯ ಪೊಲೀಸ್ ಸಿಬ್ಬಂದಿ 5000 ರೂ. ವಿಶೇಷ ಭತ್ಯೆ
ಪ್ರತಿ ಜಿಲ್ಲೆಯಲ್ಲಿ ಸೈಬರ್ ಠಾಣೆ ನಿರ್ಮಾಣದ ಗುರಿ
ಕನಕಪುರದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ
ಮೀನುಗಾರಿಕಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ
ಮೀನುಗಾರಿಕಾ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ