ಹನುಮನ ಭಕ್ತರು ಸಿಡಿದೆದ್ದರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗೀತಾರೆ - ಸಿಎಂ ಬೊಮ್ಮಾಯಿ | JANATA NEWS
ಧಾರವಾಡ : ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ, ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಬೇರು ಸಮೇತ ಕಿತ್ತೊಗಿಯುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಮಂಗಳವಾರ ಧಾರವಾಡದ ನವಲಗುಂದ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ಅದನ್ನು ಬ್ಯಾನ್ ಮಾಡುತ್ತೆವೆ ಎಂದು ಕಾಂಗ್ರೆಸ್ ಅವರು ಹೇಳುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಈಗ ಕಾಂಗ್ರೆಸ್ ಅವರು ಬಜರಂಗ ದಳ ನಿಷೇಧ ಮಾಡುವುದಾಗಿ ಹೇಳುತ್ತಾರೆ. ದೇಶದ್ರೋಹ, ಭಯೋತ್ಪಾದನೆ ಮಾಡುವ ಪಿಎಫ್ಐ ಜೊತೆ ಭಜರಂಗದಳವನ್ನು ಸೇರಿಸಿದ್ದಾರೆ. ನಮ್ಮ ಪ್ರಧಾನಿ ಮೋದಿ ಈಗಾಗಲೇ ಪಿಎಫ್ಐ ಬ್ಯಾನ್ ಮಾಡಿದ್ದಾರೆ. ನಮ್ಮ ಪರಂಪರೆ, ನಮ್ಮ ಧರ್ಮ, ನಮ್ಮ ಇತಿಹಾಸವನ್ನು ಗಟ್ಟಿಕೊಳಿಸಿರುವುದು ಭಜರಂಗದಳ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗೀತಾರೆ, ಎಂದು ಕಿಡಿಕಾರಿದರು.