ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ | JANATA NEWS

ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕನ ನಿವಾಸದ ಮೇಲೆ ಇಂದು ದಿಢೀರ್ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ಕೇಕರೆ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿಯೂ ಪ್ರಶಾಂತ್ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಚುನಾವಣೆ ಹೊತ್ತಿನಲ್ಲಿ ಮತ್ತೆ ವಿನಯ್ ಕುಲಕರ್ಣಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
English summary :IT raid on former minister Vinay Kulkarni close aide house