ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ, ಮೂವರ ದುರ್ಮರಣ | JANATA NEWS

ಯಾದಗಿರಿ : ಕೆಎಸ್‌ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಮೂವರ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಮೃತರನ್ನು ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ರಂಗಂಪೇಟೆಯ ನಾಗರಾಜ ಸಜ್ಜನ್ (59), ಪತ್ನಿ ಮಹಾದೇವಿ (50) ಹಾಗೂ ಸಂಬಂಧಿ ರೇಣುಕಾ (45) ಎಂದು ಗುರುತಿಸಲಾಗಿದೆ. ಮೃತರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳು. ಬಸ್ಸಿನಲ್ಲಿದ್ದ ಐದಾರು ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಘಟನೆ ಜರುಗಿದೆ.
ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.