ಮೈಸೂರು ದಸರಾ ಆನೆ ಬಲರಾಮ ನಿಧನ, ಭಾವುಕರಾದ ಮೋದಿ! | JANATA NEWS

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕುತ್ತಿದ್ದ ಬಲರಾಮ (67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.
ದಸರಾ ಆನೆ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ” ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಲರಾಮನ ಗಂಟಲಲ್ಲಿ ಹುಣ್ಣಾಗಿದ್ದ ಕಾರಣ ಏನನ್ನು ಸೇವಿಸದೆ ಆನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಲರಾಮ ಕೊನೆಉಸಿರೆಳೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿ ಬಲರಾಮನ ಅಂತ್ಯಕ್ರಿಯೆಯನ್ನು ಶಾಸ್ತ್ರೋತ್ರವಾಗಿ ನೆರವೇರಿಸಲಾಯಿತು. ಬಲರಾಮ ಆನೆ ಅಂತ್ಯ ಸಂಸ್ಕಾರದ ವೇಳೆ ಎಲ್ಲರೂ ಭಾವುಕರಾಗಿದ್ದರು. ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಲಾಯಿತು. ಅದರಲ್ಲೂ ಬಲರಾಮನ ಮಾವುತ ಹಾಗೂ ಪೋಷಣ ಸಿಬ್ಬಂದಿ ಬಿಕ್ಕಿ ಬಿಕ್ಕಿ ಕಣ್ಣೀರಾಕಿ ಹೆಚ್ಚು ಭಾವುಕರಾದರು.
ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6
— Narendra Modi (@narendramodi) May 8, 2023