ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ದಾಳಿ, ಜೆಡಿಎಸ್ ಅಭ್ಯರ್ಥಿ ಪತ್ನಿ, ಸೊಸೆ ಐಟಿ ವಶಕ್ಕೆ | JANATA NEWS

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಕ್ಷೇತ್ರದ JDS ಅಭ್ಯರ್ಥಿ ರವೀಂದ್ರಪ್ಪ ಅವರ ಮೇಲೆ ಐಟಿ ದಾಳಿ ಮಾಡುವ ಮೂಲಕ ಶಾಕ್ ನೀಡಿದೆ.
ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ಮನೆ ಮೇಲೆ 6 ಜನ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಅವರ ಪತ್ನಿ ಜಿ.ಪಿ.ಲತಾ ಹಾಗೂ ಅವರ ಸೊಸೆ ಶ್ವೇತಾ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ.
ಏಪ್ರಿಲ್ 28ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಾಕಷ್ಟು ದಾಖಲೆಗಳು ಲಭ್ಯವಾಗಿದ್ದು, ಅಧಿಕಾರಿಗಳು ಸೀಜ್ ಮಾಡಿದ್ದರು. ವಿಚಾರಣೆಗೆ ಬರುವಂತೆ ರವೀಂದ್ರಪ್ಪಗೆ ಅಧಿಕಾರಿಗಳು ನೋಟಿಸ್ ನೀಡಿದ್ದರು.
ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಮಯ 2ಕ್ಕೆ 6 ಜನರ ಐಟಿ ಅಧಿಕಾಗಳ ತಂಡ ಮತ್ತೆ ಪರಿಶೀಲನೆ ಮಾಡಿದ್ದು, ವಶಕ್ಕೆ ಪಡೆದಿರುವ ಸಾಧ್ಯತೆ ಎನ್ನಲಾಗುತ್ತಿದೆ.
ಈ ವೇಳೆ ವಿಚಾರಣೆಗೆ ಹಾಜರಾಗುವಂತೆ ಆದಾಯ ತೆರಿಗೆ ಇಲಾಖೆ ಲತಾ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾಗದ ಕಾರಣ ಇಂದು ವಶಕ್ಕೆ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.