ಮತದಾನ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ! | JANATA NEWS

ಬಳ್ಳಾರಿ : ಮತದಾನ ಕೇಂದ್ರದ ಆವರಣದಲ್ಲಿ ತಾಯಿ ಮಗುವಿಗೆ ಜನ್ಮ ನೀಡಿರುವಂತಹ ಅಪರೂಪದ ಘಟನೆಯೊಂದು ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಘಟನೆ ನಡೆದಿದೆ.
ತುಂಬು ಗರ್ಭಿಣಿಯಾಗಿದ್ದ ಮಣಿಲಾಗೆ ಮತದಾನ ಕೇಂದ್ರದಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಆಕೆಯನ್ನು ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದೆ. ಅಷ್ಟರಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
English summary :A woman gave birth to a child at the polling station itself