ಹೆಲಿಕಾಪ್ಟರ್ನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ | JANATA NEWS

ಹಾಸನ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್ನಲ್ಲಿ ಬಂದು ಮತ ಚಲಾಯಿಸಿದ್ದಾರೆ.
ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಮಾಡಿ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಹೆಚ್ಡಿ ದೇವೇಗೌಡ ಮತ ಚಲಾಯಿಸಿದರು.
ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿಂದು ಕುಮಾರಸ್ವಾಮಿಯವರು ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಕುಮಾರಸ್ವಾಮಿವಯರು ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಮತದಾನ ಮಾಡಿದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪಡುವಲಹಿಪ್ಪೆ ಗ್ರಾಮದ 197 ಮತಕೇಂದ್ರದಲ್ಲಿ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ ಮತ ಚಲಾಯಿಸಿದ್ದಾರೆ.