ರಾಜ್ಯದ ಜನತೆಗೆ ಬಿಗ್ ಶಾಕ್: ಮತದಾನ ಮುಗಿಯುತ್ತಿದ್ದಂತೆ ವಿದ್ಯುತ್ ದರ ಏರಿಕೆ! | JANATA NEWS

ಬೆಂಗಳೂರು : ಮತದಾನ ಮುಗಿಯುತ್ತಿದ್ದಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ದರ ಏರಿಕೆ ಶಾಕ್ ನೀಡಿದೆ.
ಈ ಹಿಂದೆ ಹಲವು ಬಾರಿ ವಿದ್ಯುತ್ ದರವನ್ನು ಹೆಚ್ಚಳ ಮಾಡುವುದಕ್ಕೆ ಆಯೋಗ ಮುಂದಾಗಿತ್ತು, ಆದರೆ ಚುನಾವಣಾ ಹಿನ್ನಲೆಯಲ್ಲಿ ಬೆಲೆ ಏರಿಕೆಯನ್ನು ಮುಂದೂಡಿಕೆ ಮಾಡಲಾಗಿತ್ತು ಎನ್ನಲಾಗಿದೆ. ಆದರೆ ಈಗ ವಿದ್ಯುತ್ ದರವನ್ನು ಹೆಚ್ಛಳ ಮಾಡಿದೆ.
ಪ್ರತಿ ಯೂನಿಟ್ ಗೆ ಸರಾಸರಿ 70 ಪೈಸೆ ಹೆಚ್ಚಳ ಮಾಡಿದೆ. ಇದಲ್ಲದೇ, ನೂತನ ದರ ಎಪ್ರಿಲ್ 1ರಿಂದ ಪೂರ್ವಾನ್ವಯವಾಗುಂತೆ ಹೆಚ್ಚಳ ಮಾಡಿದೆ. ಒಟ್ಟಾರೆ 70 ಪೈಸೆಯಲ್ಲಿ ನಿಗದಿತ ಶುಲ್ಕ ಮತ್ತು ವಿದ್ಯುತ್ ಬಳಕೆ ಶುಲ್ಕ ಎರಡೂ ಸೇರಿದೆ ಎನ್ನಲಾಗಿದೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರತಿ ಮನೆಗೆ ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ.
English summary :Big shock for the people of the state: As the polling ends, the electricity rate increases!