ಧಾರವಾಡದಲ್ಲಿ ಕ್ಷೇತ್ರಕ್ಕೆ ಪ್ರವೇಶ ಇಲ್ಲದೆ ವಿನಯ್ ಕುಲಕರ್ಣಿಗೆ ಗೆಲುವು | JANATA NEWS

ಧಾರವಾಡ : ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಭರ್ಜರಿ ಜಯ ಗಳಿಸಿದ್ದಾರೆ.
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ 17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಧಾರವಾಡ ಜಿಪಂ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿಗೆ ನಿರ್ಬಂಧಿಸಲಾಗಿತ್ತು. ಆದರೂ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ.
English summary :Vinay Kulkarni won without entering the constituency in Dharwad