ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭ! | JANATA NEWS

ಬೆಂಗಳೂರು : ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಪಕ್ಷದ ಸಭೆ ಭಾನುವಾರ ಸಂಜೆ ಶಾಂಗ್ರಿಲಾ ಹೋಟೆಲ್‌ನಲ್ಲಿ ಆರಂಭವಾಗಿದೆ. ಈ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ಸುಶೀಲ್ ಕುಮಾರ್ ಶಿಂಧೆ ಸಮ್ಮುಖದಲ್ಲಿ ನಡೆಯಲಿದೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಹತ್ವದ ಕಾಂಗ್ರೆಸ್ ಶಾಸಕಾಂಕ ಸಭೆ ಆರಂಭಗೊಂಡಿದೆ. ಎಐಸಿಸಿಯಿಂದ ಸಿಎಂ ಆಯ್ಕೆಗಾಗಿ ಅಭಿಪ್ರಾಯವನ್ನು ಸಂಗ್ರಹಿಸಲು ನೇಮಕಗೊಂಡಿರುವಂತ ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಾಬರಿಯಾ ವೀಕ್ಷಕರು ಸಭೆಯಲ್ಲಿ ಉಪಸ್ಥಿತರಾಗಿದ್ದಾರೆ.
ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಭಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಸಿಎಂ ರೇಸ್ ನಲ್ಲಿ ಸಿದ್ಧರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎನ್ನಲಾಗುತ್ತಿದೆ. ಕೆಲವೆಡೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಭಾಶಯಗಳು ಎಂದು ಅಭಿಮಾನಿಗಳು ಈಗಲೇ ಪೋಸ್ಟರ್ ಅಳವಡಿಸಿ ಸಂಭ್ರಮಿಸಲಾರಂಭಿಸಿದ್ದಾರೆ.