ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾದ ಬಿಜೆಪಿ, ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ: ಪ್ರಹ್ಲಾದ್ ಜೋಶಿ | JANATA NEWS

ಬೆಂಗಳೂರು : ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿರುವ ಬೆನ್ನಲ್ಲೇ, ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಶಾಸಕಾಂಗ ಪಕ್ಷದ ಸಭೆ ಕರೆದು ತೀರ್ಮಾನ ಮಾಡುತ್ತೇವೆ. ಅದಕ್ಕೂ ಮುನ್ನ ನಮ್ಮ ರಾಷ್ಟ್ರೀಯ ನಾಯಕರಲ್ಲೊಬ್ಬರು ಬಂದು ತೀರ್ಮಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನೆಡೆಯಾಗಿದೆ. ಇದು ನಿರಾಶಾದಾಯಕ ಫಲಿತಾಂಶ ಎಂದು ಈಗಾಗಲೇ ಹೇಳಿದ್ದೇವೆ. ಈ ಬಗ್ಗೆ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ. ಇನ್ನು ಆ ಪ್ರಕ್ರಿಯೆ ನಡೆದಿಲ್ಲ. ಆದರೆ ಇಂಥಹ ಸಂದರ್ಭವನ್ನ ಬಿಜೆಪಿ ನಾಯಕರು ಒಂದು ಸವಾಲಾಗಿ ಸ್ವೀಕರಿಸಿದ್ದು, ಮತ್ತೆ ಪುಟಿದೇಳುವ ನಿರ್ಧಾರಕ್ಕೆ ಬಂದಿದ್ದಾರೆ ಎಂದರು.
ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದ ಸಂದರ್ಭದಲ್ಲಿ ಚುನಾವಣೆ ಎದುರಾಗಿದ್ದರಿಂದ ರಾಷ್ಟ್ರೀಯ ನಾಯಕರು ಕಟೀಲ್ ಅವರಿಗೆ ಕೆಲ ಜವಾಬ್ದಾರಿ ನೀಡಿದ್ದರು. ಈಗ ಚುನಾವಣೆ ಮುಗಿದಿರುವ ಹಿನ್ನಲೆಯಲ್ಲಿ ಬದಲಾವಣೆ ಬಗ್ಗೆ ವರಿಷ್ಠರು ನಿರ್ಧಾರ ಮಾಡಲಿದ್ದಾರೆ ಎಂದರು.
ಪ್ರತಿಪಕ್ಷ ನಾಯಕರ ಆಯ್ಕೆ ಕುರಿತು ಶಾಸಕಾಂಗ ಪಕ್ಷದ ಸಭೆ ಕರೆದು ತೀರ್ಮಾನ ಮಾಡುತ್ತೇವೆ. ಅದಕ್ಕೂ ಮುನ್ನ ನಮ್ಮ ರಾಷ್ಟ್ರೀಯ ನಾಯಕರಲ್ಲೊಬ್ಬರು ಬಂದು ತೀರ್ಮಾನ ಮಾಡುತ್ತಾರೆ' ಎಂದರು.