ಸಿದ್ದರಾಮಯ್ಯರನ್ನೇ ಮುಖ್ಯಮಂತ್ರಿ ಮಾಡಬೇಕು, ರಾಜ್ಯ ಕುರುಬರ ಸಂಘದ ಆಗ್ರಹ | JANATA NEWS

ಬೆಂಗಳೂರು : ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಕುರುಬ ಸಮಾಜ ಆಗ್ರಹಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಜೊತೆ ತೀವ್ರ ಪೈಪೋಟಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡೆಸಿದ್ದಾರೆ.
ಕುರುಬ ಸಮಾಜದ ಪದಾಧಿಕಾರಿಗಳು ನಗರದಲ್ಲಿ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನ ಸಿಗಲು ಸಿದ್ದರಾಮಯ್ಯ ಸಹ ಬಹಳ ಪರಿಶ್ರಮವಹಿಸಿದ್ದಾರೆ. ಉಪಮುಖ್ಯಮಂತ್ರಿ ಆಗಿ, ಹಣಕಾಸು ಸಚಿವರಾಗಿ, ಮುಖ್ಯಮಂತ್ರಿಯಾಗಿ ಅಪಾರ ಆಡಳಿತದ ಅನುಭವ ಹೊಂದಿದ್ದಾರೆ. ಅನೇಕ ಭಾಗ್ಯಗಳನ್ನು ನೀಡಿ ನಾಡು ಮೆಚ್ಚುವ ರೀತಿಯಲ್ಲಿ ಆಡಳಿತ ನೀಡಿದ್ದಾರೆ. ಅವರಿಗೆ 13 ಬಾರಿ ಬಜೆಟ್ ಮಂಡಿಸಿದ ಅನುಭವ ಇದೆ.
ಕುರುಬ ಸಮುದಾಯದ 90% ಜನರು ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ಇದು ಸಿದ್ದರಾಮಯ್ಯರಿಗೆ ಕಡೆಯ ಚುನಾವಣೆ ಆಗಿದೆ. ರಾಜ್ಯದ ಇಡೀ ಕುರುಬ ಸಮಾಜ ಸಿದ್ದರಾಮಯ್ಯ ಬೆನ್ನೆಲುಬಾಗಿ ನಿಂತು ಕಾಂಗ್ರೆಸ್ ಪಕ್ಷದ ಗೆಲುವಿಗೆ ಸಹಕಾರ ನೀಡಿದೆ. ಹಲವು ಕಡೆ ಕುರುಬ ನಾಯಕರು ಬಂಡಾಯವೆದ್ದ್ದಿದ್ದರು, ಆದರೆ ಕುರುಬ ಸಂಘದ ಪದಾಧಿಕಾರಿಗಳು ಅವರೆಲ್ಲರನ್ನು ಕಾಂಗ್ರೆಸ್ ಪರ ಕೆಲಸ ಮಾಡುವಂತೆ ಮನವೊಲಿಸಿದರು.
ಹಾಗಾಗಿ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಹೈಕಮಾಂಡ್ ಅನ್ನು ಎಂದು ಕುರುಬ ಸಂಘ ಆಗ್ರಹಿಸಿತು.