ಬಸ್‌ನಲ್ಲೇ ಹೆಣ್ಣು ಮಗುವಿನ ಜನ್ಮ ನೀಡಿದ ಮಹಿಳೆ, ಬಸ್‌ನ ಮಹಿಳಾ ನಿರ್ವಾಹಕಿಯೇ... | JANATA NEWS

ಚಿಕ್ಕಮಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರು ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗಮಧ್ಯೆ ನಡೆದಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಬಸ್‌ನ ಮಹಿಳಾ ನಿರ್ವಾಹಕಿಯೇ ಹೆರಿಗೆ ಮಾಡಿಸಿರುವ ಘಟನೆ ಚನ್ನರಾಯಪಟ್ಟಣ - ಹಾಸನ ಮಾರ್ಗಮಧ್ಯೆ ನಡೆದಿದೆ. ಬಸ್ ಸಾಗುವ ಮಾರ್ಗದಲ್ಲಿ ಹತ್ತಾರು ಕಿಲೋಮೀಟರ್ ದೂರದಲ್ಲಿ ಯಾವುದೇ ಆಸ್ಪತ್ರೆಗಳು ಇರಲಿಲ್ಲ. ಹೀಗಾಗಿ ಬಸ್ಸಿನಲ್ಲಿದ್ದ ಮಹಿಳಾ ಕಂಡಕ್ಟರ್ ವಾಹನವನ್ನು ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.
ಗರ್ಭಿಣಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಇಬ್ಬರು ಆರೋಗ್ಯವಾಗಿದ್ದರೆ.
ಬಳಿಕ ತಾಯಿ ಮತ್ತು ಮಗುವನ್ನು 108 ಅಂಬ್ಯಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವೇಳೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರದ ಹಿನ್ನೆಲೆಯಲ್ಲಿ ಮಹಿಳಾ ಕಂಡಕ್ಟರ್ ವಸಂತ ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾದ ಮಹಿಳೆಗೆ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸಾರಿಗೆ ಬಸ್‌ನ ಚಾಲಕ, ನಿರ್ವಾಹಕಿ ವಸಂತ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಅಪಾರ ಮೆಚ್ಚುವೆ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮತ್ತು ಆಯುಕ್ತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.