ನನಗೆ ಸಿಎಂ ಸ್ಥಾನ ನೀಡದಿದ್ದರೆ ಮಲ್ಲಿಕಾರ್ಜುನ ಖರ್ಗೆಗೆ ಕೊಡಿ: ಡಿ.ಕೆ ಶಿವಕುಮಾರ್ | JANATA NEWS

ನವದೆಹಲಿ : ಕಾಂಗ್ರೆಸ್ ಭರ್ಜರಿ ಬಹುಮತ ಪಡೆದು, 135 ಸ್ಥಾನಗಳೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಸಜ್ಜಾಗಿದ್ದು, ಸಿಎಂ ಆಯ್ಕೆಯೇ ಕಗ್ಗಂಟಾಗಿದೆ.
ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಏರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಇದ್ದು, ಪಕ್ಷದ ಯಾವ ವರಿಷ್ಠರೂ ಮಾತುಕತೆ ನಡೆಸಿದರೂ ಇಬ್ಬರೂ ನಾಯಕರ ಮನವೊಲಿಕೆ ಸಾಧ್ಯವಾಗುತ್ತಿಲ್ಲ.
ದೆಹಲಿಯಲ್ಲಿ ಹೈಕಮಾಂಡ್ ಮುಂದೆ ಅಸಮಾಧಾನ ಹೊರ ಹಾಕಿರುವ ಡಿಕೆಶಿ ನನಗೆ ಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಿದ್ದರಾಮಯ್ಯಗೆ ಮಾತ್ರ ಕೊಡಬೇಡಿ, ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಸ್ಥಾನ ಕೊಡಿ, ಮಲ್ಲಿಕಾರ್ಜುನ ಖರ್ಗೆಯನ್ನು ಸಿಎಂ ಮಾಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ರಾಹುಲ್ ಗಾಂಧಿ ಜೊತೆಗಿನ ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಖರ್ಗೆ ನಿವಾಸಕ್ಕೆ ಡಿಕೆಶಿ ಆಗಮಿಸಿದ್ದಾರೆ. ರಾಹುಲ್ ಗಾಂಧಿಗೆ ಪರಿಸ್ಥಿತಿ ಮನವರಿಕೆ ಮಾಡುವಂತೆ ಖರ್ಗೆಗೆ ಮನವಿ ಮಾಡಿದ್ದಾರೆ. ಹೈಕಮಾಂಡ್ ಡಿಕೆಶಿಗೆ ಪಟ್ಟ ಕಟ್ಟಲು ಒಪ್ಪುತ್ತಿಲ್ಲ. ಈ ಸ್ಥಿತಿಯಲ್ಲಿ ಇನ್ನಷ್ಟು ಜಿದ್ದಾಜಿದ್ದಿ ಏರ್ಪಟ್ಟಿದ್ದು, ಡಿಕೆಶಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೊಸ ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ. ನೀವೇ ಬಂದು ಸಿಎಂ ಆಗಿ ಎಂದು ಡಿಕೆಶಿ ಹಠಕ್ಕೆ ಬಿದ್ದಿದ್ದಾರೆ. ನಾನು ಇಲ್ಲಾ, ನೀವು ಆದರೆ ಯಾವ ಕಾರಣಕ್ಕೂ ಸಿದ್ದರಾಮಯ್ಯ ಒಪ್ಪಲು ಸಾಧ್ಯವಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.
ಈ ಸಂಧಾನ ಯಶಸ್ವಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.