ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ, ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ | JANATA NEWS

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಸಿಬಿಐ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್, ಜುಲೈ 14ಕ್ಕೆ ಮುಂದೂಡಿದೆ.
ಆದರೆ ಸಿಬಿಐ ಪರ ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಸಿಬಿಐ ತನಿಖೆಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವಿಗೆ ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್ ನಲ್ಲೇ ತಡೆಯಾಜ್ಞೆ ತೆರವಿಗೆ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿದೆ.
ಈ ಮೂಲಕ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.