ಪಕ್ಷದ ಹಿತಾಸಕ್ತಿಯಿಂದ ಉಪಮುಖ್ಯಮಂತ್ರಿ ಸ್ಥಾನವನ್ನು ತೆಗೆದುಕೊಳ್ಳಲು ಒಪ್ಪಿದ್ದೇನೆ - ಡಿಕೆಶಿವಕುಮಾರ | JANATA NEWS

ನವದೆಹಲಿ : ರಾಜ್ಯದ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೂ ಅಂತ್ಯ ಕಂಡಿದೆ. ತಾವೇ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ ಅವರು ಕೊನೆಗೂ ಸಿಎಂ ಸ್ಥಾನವನ್ನು ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಡಲು ಒಪ್ಪಿಗೆ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ.ಶಿವಕುಮಾರ್ ಅವರು ಗುರುವಾರ ಇಂಡಿಯಾ ಟುಡೆ ಟಿವಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಪಕ್ಷದ ಹಿತಾಸಕ್ತಿಯಿಂದ ಉಪಮುಖ್ಯಮಂತ್ರಿ ಸ್ಥಾನವನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿರುವುದಾಗಿ ಖಚಿತಪಡಿಸಿದ್ದಾರೆ.
ಕರ್ನಾಟಕದ ಬಗ್ಗೆ ನಮಗೆ ಬದ್ಧತೆ ಇದೆ. ಸಂಸತ್ ಚುನಾವಣೆ ಇದೆ. ಏನು ಮಾಡುವುದು ಎಐಸಿಸಿ ಅಧ್ಯಕ್ಷರು ಹಾಗೂ ಗಾಂಧಿ ಕುಟುಂಬಕ್ಕೆ ತಲೆಬಾಗಬೇಕು. ಹಾಗಾಗಿ ಪಕ್ಷದ ಹಿತಾಸಕ್ತಿಯಿಂದ ನಾನು ಒಪ್ಪಿಕೊಂಡಿದ್ದೇನೆ, ಎಂದು ಶಿವಕುಮಾರ್ ಹೇಳಿದರು.
"ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಜವಾಬ್ದಾರಿ ನನ್ನ ಮೇಲಿದೆ. ನಾವು ಮಾಡಲೇಬೇಕು", ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.