ಎಐಸಿಸಿಯಿಂದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರು ಘೋಷಣೆ | JANATA NEWS

ಬೆಂಗಳೂರು : ಸುದೀರ್ಘ ನಾಲ್ಕು ದಿನಗಳ ಕಾಲ ಮಾತುಕತೆ ನಡೆಸಿದ ನಂತರ ಕೊನೆಗೂ ಕಾಂಗ್ರೆಸ್ ನ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಆಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ.
ಎಐಸಿಸಿಯಿಂದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಹೆಸರು ಘೋಷಣೆಯಾದ ಬೆನ್ನಲ್ಲೇ ಸಿದ್ದರಾಮಯ್ಯನವರು ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಸಂತೋಷವನ್ನು ಹಂಚಿಕೊಂಡಿದ್ದಾರೆ.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮಾಡಿ ಡಿಕೆಶಿ ಹಾಗೂ ಖರ್ಗೆ ಅವರೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.
ಈ ಕುರಿತು ಎನ್ ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ, ನಾನು ಹೈಕಮಾಂಡ್ ನಿರ್ಧಾರವನ್ನು ಕೋರ್ಟ್ ತೀರ್ಪಿನಂತೆ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಹೈಕಮಾಂಡ್ ನಿರ್ಧರಿಸಿದೆ. ಇದು ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಹೈಕಮಾಂಡ್ ನಿರ್ಧಾರವನ್ನು ಒಪ್ಪಿರುವುದಾಗಿ ಡಿಕೆಶಿ ಹೇಳಿದರು.
ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
— Siddaramaiah (@siddaramaiah) May 18, 2023
ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ