ಇಂದು ಸಂಜೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ | JANATA NEWS

ಬೆಂಗಳೂರು : ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಹಿನ್ನೆಲೆ ಕೆಪಿಸಿಸಿ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇಂದಿರಾ ಭವನದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ಹಿನ್ನೆಲೆ ಕೆಪಿಸಿಸಿ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸತ್ ಸದಸ್ಯರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.
2 ನೇ ಬಾರಿಗೆ ಸಿದ್ದರಾಮಯ್ಯಗೆ ಸಿಎಂ ಪಟ್ಟ ಸಿಕ್ಕಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಹೂ ಮಳೆಯೊಂದಿಗೆ 'ಸಿದ್ದರಾಮಯ್ಯ' ಸ್ವಾಗತಕ್ಕೆ ಸಿದ್ದತೆ ಅಭಿಮಾನಿಗಳು ಮಾಡಿಕೊಂಡಿದ್ದಾರೆ.