ನೂತನ ಸಿಎಂ, ಡಿಸಿಎಂ ರಿಗೆ ಶುಭ ಹಾರೈಸಿದ ಹಂಗಾಮಿ ಸಿಎಂ ಬೊಮ್ಮಾಯಿ | JANATA NEWS

ಬೆಂಗಳೂರು : ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ನ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಗಳಾದ ಡಿಕೆಶಿವಕುಮಾರ ರವರಿಗೆ ಅಭಿನಂದನೆ ಸಲ್ಲಿಸಿದ್ದು ಶುಭ ಹಾರೈಸಿದ್ದಾರೆ.
ಬೊಮ್ಮಯಿ ಅವರು ಈ ಕುರಿತು ಹೇಳಿಕೆ ನೀಡಿದ್ದು, ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಡಿಕೆಶಿವಕುಮಾರ ರವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಸಿದ್ದರಾಮಯ್ಯನವರಿಗೆ ಹಾರ್ದಿಕ ಅಭಿನಂದನೆಗಳು. ನೀವು ಕರ್ನಾಟಕದ ಮಹಾ ಜನತೆಯ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ, ಎಂದು ಟ್ವೀಟ್ ಮಾಡಿದ್ದಾರೆ.