ದೇವೇಗೌಡರ ಮನೆಗೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ ಹಂಗಾಮಿ ಸಿಎಂ ಬೊಮ್ಮಾಯಿ | JANATA NEWS

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತರೆ ಬಿಜೆಪಿ ಮುಖಂಡರೊಂದಿಗೆ ನಿನ್ನೆ ಸಂಜೆ ಗುರುವಾರ ಜಾತ್ಯತೀತ ಜನತಾದಳ(ಜೆಡಿಎಸ್) ಪಕ್ಷದ ವರಿಷ್ಟ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಈ ಸಂದರ್ಭದಲ್ಲಿ ಆರ್.ಅಶೋಕ, ಗೋವಿಂದಕರಜೋಳ ಹಾಗೂ ಎಚ್.ಡಿ.ರೇವಣ್ಣ ಉಪಸ್ಥಿತರಿದ್ದರು.
ಕಾಂಗ್ರೆಸ್ ನೂತನ ಸರ್ಕಾರ ರಚನೆಗೆ ಕಸರತ್ತು ಕೊನೆಗೊಂಡು, ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯಾಗಿದ್ದ ಡಿಕೆಶಿವಕುಮಾರ ಅವರು ಸಿಎಂ ಸ್ಥಾನವನ್ನು ಬಿಟ್ಟುಕೊಟ್ಟು ಡಿಸಿಎಂ ಸ್ಥಾನ ಒಪ್ಪಿಕೊಂಡ ಬೆನ್ನಲ್ಲೇ ಬಿಜೆಪಿ ನಾಯಕರ ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
English summary : Interim CM Bommai visits Deve Gowda house to wish him on his birthday