ಮರಕ್ಕೆ ಬೈಕ್ ಡಿಕ್ಕಿ, ಅಪ್ರಾಪ್ತ ಬಾಲಕರಿಬ್ಬರು ಸ್ಥಳದಲ್ಲೇ ಸಾವು | JANATA NEWS

ಗದಗ : ನಿಯಂತ್ರಣ ತಪ್ಪಿ ಬೈಕ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತ ಬಾಲಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ನಡೆದಿದೆ.
ಗದಗದ ರೋಣ ನಿವಾಸಿಗಳಾದ ಅನುಪ ಇಟಗಿ (15), ಶ್ರೀಶಾಂತ ಗಡಗಿ (15) ಸಾವಿಗೀಡಾದ ಬಾಲಕರು.
ರೋಣ ಪಟ್ಟಣದ ಬಸ್ ಡಿಪೋ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಇವರ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Accident in Gadag