ಸ್ಪೀಕರ್ ಆಗುವ ಅರ್ಹತೆ ನನಗೆ ಇಲ್ಲ, ಪರೋಕ್ಷವಾಗಿ ಸಚಿವ ಸ್ಥಾನ ಆಕಾಂಕ್ಷಿ ಎಂದ ಆರ್.ವಿ.ದೇಶಪಾಂಡೆ | JANATA NEWS

ಬೆಂಗಳೂರು : ನನಗೆ ಸ್ಪೀಕರ್ ಆಗುವ ಸರ್ಹತೆ ಇಲ್ಲ ಎಂದು ಸ್ವತಃ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಮಂತ್ರಿ ಸ್ಥಾನದ ಆಕಾಂಕ್ಷಿ ಎಂಬಂತೆ ಮಾತನಾಡಿದ್ದಾರೆ.
ಶನಿವಾರ, ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಸೇರಿದಂತೆ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಆದರೆ, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬುದಕ್ಕೆ ಯಾರ ಬಳಿಯೂ ಸ್ಪಷ್ಟ ಉತ್ತರಗಳಿಲ್ಲ. ಸಚಿವ ಸಂಪುಟದಲ್ಲಿ ನಾನು ಇರುವ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ರಾಜ್ಯದ ಸಚಿವ ಸಂಪುಟದಿಂದ ಹಿರಿಯರನ್ನು ಕೈ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಆರ್.ವಿ.ದೇಶಪಾಂಡೆ ಹೇಳಿದರು.
ಜೊತೆಗೆ 2023ರ ಹೊಸ ಕಾಂಗ್ರೆಸ್ ಸರ್ಕಾರದಲ್ಲಿ ನನಗೆ ಸ್ಪೀಕರ್ ಆಗುವ ಅರ್ಹತೆ ಇಲ್ಲವೆಂದು ಅನ್ನಿಸುತ್ತಿದೆ ಎಂದರು. ಕಾಂಗ್ರೆಸ್ ಸರ್ಕಾರದ ಸ್ಪೀಕರ್ ಆಗುವ ಅರ್ಹತೆ ನನಗಿಲ್ಲ. ಅದು ಬಹಳ ದೊಡ್ಡ ಹುದ್ದೆಯಾಗಿದ್ದು, ಸರ್ಕಾರದಲ್ಲಿ ಅತ್ಯಂತ ದೊಡ್ಡ ಜವಾಬ್ದಾರಿ ಹುದ್ದೆಯಾಗಿದೆ. ಈ ಬಗ್ಗೆ ಯಾರೂ ನನ್ನ ಬಳಖಿ ಚರ್ಚಿಸಿಲ್ಲ. ನಾನು ಈಗಾಗಲೇ ರಾಜ್ಯದಲ್ಲಿ 8 ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದೇನೆ. ಈ ಬಾರಿ ಏನು ಮಾಡುತ್ತಾರೆ ಗೊತ್ತಿಲ್ಲ. ಎಲ್ಲವೂ ಸಿಎಂ ಹಾಗೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.