ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ! ನೂತನ ಸಚಿವರ ಪಟ್ಟಿ ಇಲ್ಲಿದೆ | JANATA NEWS

ಬೆಂಗಳೂರು : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಇವರ ಜೊತೆ 8 ಸಚಿವರು ಪದಗ್ರಹಣ ಮಾಡಿದರು. ಮುಖ್ಯಮಂತ್ರಿಗಳಿ ಮತ್ತು ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಸಿದ್ದರಾಮಯ್ಯ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಕಳೆದ ಬಾರಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಇದೀಗ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ.
ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಹಾಗೂ ಡಿ ಕೋಟೆ ಶಿವಕುಮಾರ್ ಅವರು ನೊಣವಿನಕೆರೆಯ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ಸಚಿವರ ಪಟ್ಟಿ ಇಲ್ಲಿದೆ-
ಡಾ.ಜಿ.ಪರಮೇಶ್ವರ್
ಕೆ.ಹೆಚ್. ಮುನಿಯಪ್ಪ
ಕೆ.ಜೆ. ಜಾರ್ಜ್
ಎಂ.ಬಿ.ಪಾಟೀಲ್
ಸತೀಶ್ ಜಾರಕಿಹೊಳಿ
ಪ್ರಿಯಾಂಕ್ ಖರ್ಗೆ
ರಾಮಲಿಂಗ ರೆಡ್ಡಿ
ಜಮೀರ್ ಅಹ್ಮದ್ ಖಾನ್
ಇದೇ ಸಂದರ್ಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.