8 ಸಚಿವರ ಪ್ರಮಾಣ ವಚನ ಸ್ವೀಕಾರ, ಯಾರ ಹೆಸರಲ್ಲಿ ಪ್ರಮಾಣವಚನ ನಿಮಗೆ ಗೊತ್ತಾ? | JANATA NEWS

ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಳಿಕ ಎಂಟು ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಡಿ.ಕೆ.ಶಿವಕುಮಾರ್, ಗಂಗಾಧರ ಅಜ್ಜಯ್ಯನ ಹೆಸರಲ್ಲಿ ಪದಗ್ರಹಣ ಮಾಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಡಾ.ಜಿ.ಪರಮೇಶ್ವರ್:
ಮೊದಲಿಗೆ ಡಾ.ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೆ.ಹೆಚ್.ಮುನಿಯಪ್ಪ:
ನೂತನ ಸಚಿವರಾಗಿ ಕೆ. ಹೆಚ್. ಮುನಿಯಪ್ಪ ಪ್ರಮಾಣವಚನ ಸ್ವೀಕರಿಸಿದ್ದು, ಇವರು ದೇವರ ಹೆಸರಿನಲ್ಲಿ ಪದಗ್ರಹಣ ಮಾಡಿದ್ದಾರೆ.
ಕೆ.ಜೆ.ಜಾರ್ಜ್:
ದೇವರ ಹೆಸರಿನಲ್ಲಿ ಕೆ.ಜೆ. ಜಾರ್ಜ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಎಂ.ಬಿ. ಪಾಟೀಲ್:
ಬಬಲೇಶ್ವರ ಕ್ಷೇತ್ರದ ಲಿಂಗಾಯತ ನಾಯಕ ಎಂ.ಬಿ. ಪಾಟೀಲ್ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಸತೀಶ್ ಜಾರಕಿಹೊಳಿ:
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಸತೀಶ್ ಜಾರಕಿಹೊಳಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರು ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಮಾಡಿದರು.
ಪ್ರಿಯಾಂಕ್ ಖರ್ಗೆ:
ದೇವರ ಹೆಸರಲ್ಲಿ ಪ್ರಿಯಾಂಕ್ ಖರ್ಗೆ ಪ್ರಮಾಣವಚನ ಸ್ವೀಕಾರ ಮಾಡಿದರು.
ಜಮೀರ್ ಅಹ್ಮದ್ ಖಾನ್:
ಅಲ್ಲಾಹ್ ಮತ್ತು ತಾಯಿ ಹೆಸರಿನಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ಬಿಝೆಡ್ ಜಮೀರ್ ಅಹ್ಮದ್ ಖಾನ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಮಲಿಂಗಾ ರೆಡ್ಡಿ:
ಸಿದ್ದರಾಮಯ್ಯ ಸಂಪುಟದ ಸಚಿವರಾಗಿ ರಾಮಲಿಂಗಾ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ.