ಬಿಬಿಎಂಪಿ ಅಧಿಕಾರಿಗಳ ತೀವ್ರ ನಿರ್ಲಕ್ಷ : ಅಂಡರ್ ಪಾಸ್ ನಲ್ಲಿ ತುಂಬಿದ್ದ ಮಳೆ ನೀರಿನಲ್ಲಿ ಸಿಲುಕಿ ಯುವತಿ ಸಾವು | JANATA NEWS

ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳ ತೀವ್ರ ನಿರ್ಲಕ್ಷದಿಂದ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ತುಂಬಿದ್ದ ಮಳೆ ನೀರಿನಲ್ಲಿ ಸಿಲುಕಿ ಯುವತಿ ಯೊಬ್ಬಳು ಸಾವನಪ್ಪಿದ್ದಾಳೆ.
ಬೆಂಗಳೂರಿನ ಕೆಆರ್ ವೃತ್ತದ ಅಂಡರ್‌ಪಾಸ್‌ನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದಲ್ಲಿ ನೀರು ನಿಂತಿದೆ.
ಇದಕ್ಕೂ ಮುನ್ನ ಅಂಡರ್‌ಪಾಸ್‌ನಲ್ಲಿ ಸಿಲುಕಿದ್ದ ಹಲವರನ್ನು ಸುರಕ್ಷಿತವಾಗಿ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಆಗಿರುವ ಹಾನಿಯನ್ನು ಅವಲೋಕಿಸಿದ ಸಿಎಂ ಸಿದ್ದರಾಮಯ್ಯ, ನಗರದ ಕೆಆರ್ ಸರ್ಕಲ್ ಪ್ರದೇಶದಲ್ಲಿನ ಅಂಡರ್‌ಪಾಸ್‌ನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಯುವತಿಯ ನಿಧನಕ್ಕೆ ಸಂತಾಪ ಸೂಚಿಸಿದರು.
ಬಳಿಕ ಕೆಆರ್ ವೃತ್ತದಲ್ಲಿ ಅಂಡರ್‌ಪಾಸ್‌ನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಯುವತಿ ಭಾನುರೇಖಾ ಅವರ ಕುಟುಂಬ ಸದಸ್ಯರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು.