ಪ್ರೀತಿ-ಗೌರವವನ್ನು ಕಾಣಿಕೆಗಳನ್ನು ಪುಸ್ತಕದ ರೂಪದಲ್ಲಿ ಮಾತ್ರ ನೀಡಬಹುದು - ಸಿಎಂ ಸಿದ್ದರಾಮಯ್ಯ | JANATA NEWS

ಬೆಂಗಳೂರು : ನೂತನ ಸಿಎಂ ಸಿದ್ದರಾಮಯ್ಯ ನವರು ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ಪ್ರೀತಿ-ಗೌರವವನ್ನು ಕಾಣಿಕೆಗಳನ್ನು ಪುಸ್ತಕದ ರೂಪದಲ್ಲಿ ಮಾತ್ರ ನೀಡಬಹುದು ಎಂದು ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, "ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ." ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ತಮ್ಮನ್ನು ಭೇಟಿಯಾಗುವವರು ಪ್ರೀತಿ-ಗೌರವವನ್ನು ಕಾಣಿಕೆಗಳನ್ನು ಪುಸ್ತಕದ ರೂಪದಲ್ಲಿ ಹಾಗೂ ಖಾದಿ ಕರವಸ್ತ್ರದ ರೂಪದಲ್ಲಿ ಮಾತ್ರ ನೀಡಬಹುದು, ಎಂದು ಪ್ರಧಾನಿ ಅವರ ಕಾರ್ಯಾಲಯ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.