ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಸಾವು! | JANATA NEWS

ಹಾವೇರಿ : ಹಾನಗಲ್ಲ ತಾಲೂಕಿನ ಮಹಾರಾಜಪೇಟೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ನಾಗರಾಜ ಮುತ್ನಾಳ (22) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕುರಿಗಳನ್ನು ಮೇಯಿಸುವಾಗ ಸಿಡಿಲು ಬಡಿದು ಈತ ಮೃತಪಟ್ಟಿದ್ದಾನೆ.
ಮೃತ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹಾನಗಲ್ಲಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
English summary :The shepherd died on the spot after being struck by lightning!