ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ! | JANATA NEWS

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಳೆದ ಚುನಾವಣೆಗಿಂತ ಕಡಿಮೆ ಸ್ಥಾನ ಗೆದ್ದಿತ್ತು. ಕೇವಲ 16 ಸ್ಥಾನಗಳನ್ನು ಈ ಬಾರಿಯ ಚುನಾವಣೆಯಲ್ಲಿ ಗೆದ್ದುಕೊಂಡಿತ್ತು. ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆಹೊತ್ತು ತಾವು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.
ನನ್ನ ರಾಜೀನಾಮೆ ಪತ್ರವನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.
ಯು.ಟಿ. ಖಾದರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಕ್ಕೆ ಟೀಕಿಸಿರುವ ಸಿ.ಎಂ. ಇಬ್ರಾಹಿಂ, ಯು.ಟಿ ಖಾದರ್ ಅವರನ್ನು ಡಿಸಿಎಂ ಮಾಡಬಹುದಿತ್ತಲ್ಲ. ಅವರನ್ನು ಸ್ಪೀಕರ್ ಮಾಡಿದ್ದಾರೆ. ಈಗ ಅವರು ಎದ್ದೇಳಂಗೂ ಇಲ್ಲ. ಮಾತನಾಡಂಗೂ ಇಲ್ಲ ಎಂಬುದಾಗಿ ಖಾದರ್ ಸ್ಪೀಕರ್ ಮಾಡಿದ್ದಕ್ಕೆ ಟೀಕಿಸಿದರು.