ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ | JANATA NEWS

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮಾರಕಾಸ್ತ್ರ ಗಳಿಂದ ಮಾರಣಾಂತಿಕ ದಾಳಿ ನಡೆಸಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ, ಬಜರಂಗದಳದ ಸ್ಥಳೀಯ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಮಹೇಂದ್ರ ಮತ್ತು ಪ್ರಶಾಂತ್ ಅವರ ತಲೆ ಮತ್ತು ಕಾಲಿಗೆ ಗಾಯಗಳಾಗಿವೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿಯ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿಕಾಂಗ್ರೆಸ್ ನವರು ಈ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
English summary :Fatal attack on BJP, Bajrang Dal workers by head