ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲು | JANATA NEWS

ಮೈಸೂರು : ಕಳೆದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ಫೆಬ್ರವರಿ 14ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಅಶ್ವತ್ಥನಾರಾಯಣ್ ಅವರು, ಉರಿಗೌಡ ಮತ್ತು ನಂಜೇಗೌಡರು ಟಿಪ್ಪು ಸುಲ್ತಾನನ್ನು ಹೇಗೆ ಕೊಂದು ಹಾಕಿದರೋ, ಹಾಗೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಹೇಳಿಕೆ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದರು, ಆದಾದ ಬಳಿಕ ರಾಜ್ಯದ ನಾನಾ ಕಡೆಗಳಲ್ಲಿ ಅವರ ವಿರುದ್ದ ದೂರು ದಾಖಲಾಗಿತ್ತು.
ಈ ಸಂಬಂಧ ಇಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮೈಸೂರು ಜಿಲ್ಲಾಕಾಂಗ್ರೆಸ್ ನಿಯೋಗದೊಂದಿಗೆ ದೇವರಾಜ ಪೊಲೀಸ್ ಠಾಣೆಗೆ ತೆರಳಿ, ಅಶ್ವತ್ಥನಾರಾಯಣ ವಿರುದ್ಧ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ನಾಯಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 506, 153 ರಡಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ಹಿಂದೆ ದೂರು ನೀಡಿದ್ದು, ಆದರೆ ದೂರು ಪಡೆದುಕೊಂಡಿದ್ದ ಪೋಲಿಸರು ಎಫ್‌ಐಆರ್ ದಾಖಲು ಮಾಡಿರಲಿಲ್ಲ.