ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ | JANATA NEWS

ಮೈಸೂರು : ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ ಅವರು, ಮತದಾರರು ಕಾಂಗ್ರೆಸ್ ಮುಖ ನೋಡಿ ಮತ ಹಾಕಿಲ್ಲ. ಕಾಂಗ್ರೆಸ್ ನೀಡಿದ ಕ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ.
ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರ ಎಲ್ಲ ಮನೆಯ ಯಜಮಾನಿಗೆ 2 ಸಾವಿರ ರೂ. ಕೊಡುವುದರ ಜತೆಗೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು.
ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ಸಿನವರು ಜನರಿಗೆ ಕೊಟ್ಟ ಭರವಸೆ ಈಡೇರಿಸಬೇಕು. ರಾಜಸ್ಥಾನದಲ್ಲಿ ಇವತ್ತಿನವರೆಗೂ ಈ ಹಿಂದೆ ಕೊಟ್ಟ ಭರವಸೆ ಈಡೇರಿಸಿಲ್ಲ. ಒಂದು ವೇಳೆ ಗ್ಯಾರಂಟಿಗಳನ್ನು ಈಡೇರಿಸದಿದ್ದರೆ ಜೂನ್ 1ರಿಂದ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.
ಮೈಸೂರು ನನ್ನ ಕ್ಷೇತ್ರ. ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಬಳಿ ಬೇಕಾದರೂ ಹೋಗುತ್ತೇನೆ. ಕೊಡಗು ಮತ್ತು ಮೈಸೂರು ಅಭಿವೃದ್ಧಿಗಾಗಿ ಯಾರ ಕೈಕಾಲು ಬೇಕಾದರೂ ಹಿಡಿಯುತ್ತೇನೆ. ಚುನಾವಣೆ ಬಂದಾಗ ಅಷ್ಟೇ ರಾಜಕಾರಣ ಮಾಡಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು.
ಅಭಿವೃದ್ಧಿ ಪರ ಇರುವವರನ್ನು ಮೈಸೂರು ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಿಸಬೇಕು. ಈ ವಿಚಾರವಾಗಿ ತಾವು ಸಿಎಂ ಮನೆಗೆ ಹೋಗುವುದಾಗಿ ತಿಳಿಸಿದರು.