Fri,May10,2024
ಕನ್ನಡ / English

ಹೊಸ ಸಂಸತ್​ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ, ಸೆಂಗೋಲ್ ಪ್ರತಿಷ್ಠಾಪನೆ! | JANATA NEWS

28 May 2023
1829

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸೆಂಟ್ರಲ್​ ವಿಸ್ತಾ ಯೋಜನೆಯ ಭಾಗವಾಗಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ ಮಂತ್ರಘೋಷಗಳ ಪಠಣದ ನಡುವೆ ಉದ್ಘಾಟಿಸಿದರು.

ನೂತನ ಸಂಸತ್ ಭವನದಲ್ಲಿ ನಡೆದ 'ಸರ್ವ ಧರ್ಮ ಪ್ರಾರ್ಥನೆ' ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್ ಟಾಟಾ, ಕೇಂದ್ರ ಸಚಿವ ಹೆಚ್‌.ಎಸ್ ಪುರಿ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ಮತ್ತು ವಿವಿಧ ಧಾರ್ಮಿಕ ಮುಖಂಡರು ಸೇರಿದಂತೆ ಕೇಂದ್ರ ಸಚಿವರು ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ನೂತನ ಸಂಸತ್ ಭವನದಲ್ಲಿ ಐತಿಹಾಸಿಕ 'ಸೆಂಗೊಲ್' ಸ್ಥಾಪಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಮಠಾಧೀಶರಿಂದ ಆಶೀರ್ವಾದ ಪಡೆದರು.

janata

ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ 'ಸೆಂಗೋಲ್​' ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು. ಪೂಜ್ಯರ ಆಶೀರ್ವಾದ ಪಡೆದ ಪ್ರಧಾನಿಗಳು, ಅದರ ಮುಂದೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.

ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್​ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್​ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.

ಇದೇ ಸೆಂಗೋಲ್ ಅನ್ನು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಆಗಸ್ಟ್ 14 ರ ರಾತ್ರಿ ತಮ್ಮ ನಿವಾಸದಲ್ಲಿ ಹಲವಾರು ನಾಯಕರ ಸಮ್ಮುಖದಲ್ಲಿ ಸ್ವೀಕರಿಸಿದ್ದರು.

RELATED TOPICS:
English summary :Prime Minister Modi inaugurated the new Parliament House, Sengol installation!

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...