ಸಾರಿಗೆ ಬಸ್ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ: ರಾಮಲಿಂಗಾರೆಡ್ಡಿ | JANATA NEWS
ಬೆಂಗಳೂರು : ರಾಜ್ಯದ ಎಲ್ಲ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು, ಷರತ್ತು ವಿಧಿಸಲ್ಲ ಎಂದು ಸಾರಿಗೆ ಸಚಿವ ಡಾ ರಾಮಲಿಂಗಾರೆಡ್ಡಿ ಹೇಳಿದರು.
ರಾಜ್ಯಾದ್ಯಂತ ಮಹಿಳಾ ಪ್ರಯಾಣಿಕರಿಗೆ ಬಸ್ ಪ್ರಯಾಣ ಉಚಿತ ಇರಲಿದೆ. ಎಲ್ಲ ಹೆಣ್ಣು ಮಕ್ಕಳು, ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತಾಡಿದ ಸಚಿವರು, ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ನಾಲ್ಕು ನಿಗಮಗಳ ಒಟ್ಟು ಆದಾಯ 8,946.85 ಕೋಟಿ ರೂ. ಇದೆ. ಒಟ್ಟು ಕಾರ್ಯಾಚರಣೆ ವೆಚ್ಚ 12,750.49 ಕೋಟಿ ರೂ. ಇದೆ. ನಾಲ್ಕು ನಿಗಮಗಳ ಆರ್ಥಿಕ ಪರಿಸ್ಥಿತಿ, ಕೋವಿಡ್ನಲ್ಲಿ ನಷ್ಟ, ಹೊಸ ಬಸ್ ಖರೀದಿ, ನೌಕರರ ನೇಮಕ ಬಗ್ಗೆ ಚರ್ಚೆ ಆಗಿದೆ. ಡಿಮ್ಯಾಂಡ್ ಇರೋ ಕಡೆ ಬಸ್ ಹಾಕಲು ಚರ್ಚೆ ಮಾಡಿದ್ದೀವಿ. ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದರು.
ಹಾಗಾಗಿ ರಾಜ್ಯದ ಸುಮಾರು 3.5 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಇದಕ್ಕೆ ಯಾವುದೇ ಷರತ್ತುಗಳಿಲ್ಲ. ಮುಖ್ಯಮಂತ್ರಿಗಳು, ಎಲ್ಲ ಕಾರ್ಯದರ್ಶಿಗಳು ಹಾಗೂ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.