ಬೆಂಗಳೂರಿನ ಐಟಿ ಕಂಪೆನಿಗೆ ಕಂಪನಿಗೆ ಬಾಂಬ್ ಬೆದರಿಕೆ ಕರೆ | JANATA NEWS

ಬೆಂಗಳೂರು : ಬೆಳ್ಳಂದೂರಿನಲ್ಲಿರುವ ಐಬಿಡಿಒ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಪೋಲಿಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ಳಂದೂರಿನ ಹೊರವರ್ತುಲ ರಸ್ತೆಯಲ್ಲಿರುವ ಕನ್ಸಲ್ ಟೇನ್ಸಿ ಐಬಿಡಿಒ ಕಂಪನಿಗೆ ಇಂದು ಬೆಳಗ್ಗ್ಗೆ ಕಂಪನಿಯಲ್ಲಿ ಬಾಂಬ್ ಇಡಲಾಗಿದೆ ಕೆಲ ಹೊತ್ತಿನಲ್ಲಿ ಬಾಂಬ್ ಸ್ಪೋಟಗೊಳ್ಳಲಿದೆ ಎಂದು ಕಚೇರಿ ನಂಬರ್ ಗೆ ಅನಾಮಿಕ ಕರೆ ಬಂದಿತ್ತು, ಈ ಕರೆ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಹುಸಿ ಬಾಂಬ್ ಕರೆ ಎಂದು ಸ್ಪಷ್ಟಪಡಿಸಿದರು.
ಬಾಂಬ್ ಕರೆ ಬಂದ ಮೊಬೈಲ್ ನಂಬರ್ ಪರಿಶೀಲಿಸಿದಾಗ ಕಂಪೆನಿಯ ಮಾಜಿ ಉದ್ಯೋಗಿಯೇ ಕರೆ ಮಾಡಿರುವುದು ತಿಳಿದುಬಂದಿದೆ. ಕೆಟ್ಟ ನಡವಳಿಕೆಯ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಉದ್ಯೋಗಿಯಾಗಿದ್ದ ನವನೀತ್ ಪ್ರಸಾದ್ ಎಂಬಾತನನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು.
ಇದರಿಂದ ಆಕ್ರೋಶಗೊಂಡಿದ್ದ ಆತ ಕಂಪೆನಿಗೆ ಹುಸಿ ಬಾಂಬ್ ಕರೆ ಮಾಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.