ಹುಬ್ಬಳ್ಳಿ-ಧಾರವಾಡ ಪಾಲಿಕೆ ಗದ್ದುಗೆ BJP ತೆಕ್ಕೆಗೆ: ಜಗದೀಶ್ ಶೆಟ್ಟರ್‌ಗೆ ಭಾರೀ ಮುಖಭಂಗ | JANATA NEWS

ಹುಬ್ಬಳ್ಳಿ : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಸತತ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ.
ಪಾಲಿಕೆಯಲ್ಲಿ ಅಧಿಕಾರ ರಚನೆ ಮಾಡಲು ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಸಂತೋಷ ಲಾಡ್ ಅವರು ಕಾರ್ಯತಂತ್ರ ರೂಪಿಸಿದ್ದರು. ಆದರೆ, ಅವರ ಕಾರ್ಯತಂತ್ರ ಕೊನೆಗೂ ಫಲಿಸಲಿಲ್ಲ. ಬಿಜೆಪಿ ಗೆಲುವಿನಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ಶ್ರೀಮತಿ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಸತೀಶ ಹಾನಗಲ್ ರವರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಈ ಸಾಧನೆಯ ಹಿನ್ನೆಲೆಯಲ್ಲಿ ಅವಿರತವಾಗಿ ಶ್ರಮಿಸಿರುವ ಸಮಸ್ತ ಕಾರ್ಯಕರ್ತ ಬಂಧುಗಳಿಗೆ ಹಾಗೂ ಪ್ರಮುಖರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ನಮ್ಮ ಪಕ್ಷದ ಶ್ರೀಮತಿ ವೀಣಾ ಬಾರದ್ವಾಡ ಹಾಗೂ ಉಪಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಸತೀಶ ಹಾನಗಲ್ ರವರಿಗೆ ಹಾರ್ದಿಕ ಅಭಿನಂದನೆಗಳು.
— Basavaraj S Bommai (@BSBommai) June 20, 2023
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸತತ 12ನೇ ಬಾರಿಗೆ ಬಿಜೆಪಿ ಅಭ್ಯರ್ಥಿ ಮಹಾಪೌರರಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.… pic.twitter.com/rjXm4tiG10