Thu,Dec11,2025
ಕನ್ನಡ / English

ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್​ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ? | JANATA NEWS

21 Jun 2023

ಚಿಕ್ಕಮಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗ್ಯಾರಂಟಿಗಳನ್ನು ಘೋಷಿಸುವಾಗ ಕಾಂಗ್ರೆಸ್​ ನಾಯಕರ ತಲೆಯಲ್ಲಿ ಮೆದುಳು ಇರಲಿಲ್ಲವೇ ಸಗಣಿ ತುಂಬಿತ್ತೇ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ನೀವು ಘೋಷಿಸಿರುವಂತೆ 10 ಕೆಜಿ ಅಕ್ಕಿ ಕೊಡಿ. ಅಂದರೆ ಒಬ್ಬರಿಗೆ ತಲಾ 15 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ಅಕ್ಕಿ ದಾಸ್ತಾನು ಇಟ್ಟುಕೊಂಡಿರುವುದು ತುರ್ತು ಸಂದರ್ಭಕ್ಕಅಗಿಯೇ ಹೊರತು ಕರ್ನಾಟಕಕ್ಕೆ ಕೊಡುವುದಕ್ಕೆ ಅಲ್ಲ. ಬರ, ಸಾಂಕ್ರಾಮಿಕ, ನೆರೆಯಂತಹ ಸಂದರ್ಭಗಳನ್ನು ನಿಭಾಯಿಸಲೆಂದು ಅಕ್ಕಿಯನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ. ಬೇರೆ ರಾಜ್ಯಗಳಿಂದ ಅಥವಾ ರೈತರಿಂದ ಅಕ್ಕಿಯನ್ನು ಖರೀದಿಸಿ ಕಾಂಗ್ರೆಸ್​ನವರು ಜನತೆಗೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ಸಿಗರಿಗೆ ಮಾನ-ಮರ್ಯಾದೆ ಇಲ್ಲ. ವೋಟು ಹಾಕಿಸಿಕೊಂಡು ಜನರಿಗೆ ಮೋಸ ಮಾಡಿದ್ದೀರಾ. ಸಿದ್ದರಾಮಯ್ಯನವರೇ ನಿಮ್ಮ ಬೇಜವಾಬ್ದಾರಿ ಹೇಳಿಕೆಗಳನ್ನು ವಾಪಸ್ಸು ತೆಗೆದುಕೊಳ್ಳಿ. ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನು ಗೆಲ್ಲುವುದಕ್ಕೆ ಇಲ್ಲಸಲ್ಲದ ಭರವಸೆ, ಆಸೆ ತೋರಿಸಿದ್ದರು ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಲಾಗದೆ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೊಟ್ಟು ಮಾಡುತ್ತಿದ್ಧಾರೆ. ಗ್ಯಾರಂಟಿಗ ಹೆಸರಿನಲ್ಲಿ ಮತ ಪಡೆದಿರುವ ಸಿದ್ದರಾಮಯ್ಯನವರು ಅಧಿಕಾರ ನಡೆಸುವ ಯೋಗ್ಯತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Did the Congress leaders not have brains while announcing the guarantees?

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...